ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಭಾರೀ ಮೇಘಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಭಾರೀ ಸಾವು ನೋವುಗಳಾಗಿವೆ. ಕಿಶ್ತಾವಾರ್ ಜಿಲ್ಲೆಯ ಪದ್ದರ್ ಚಶೋತಿ ಎಂಬಲ್ಲಿ ಭಾರೀ ಮಳೆಯಿಂದ ಪ್ರವಾಹ ಸಂಭವಿಸಿದ್ದು, ಈ ಪ್ರಕೃತಿ ವಿಕೋಪ ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ.
ಇನ್ನು 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ, 200ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಹಿಮಾಲಯದಲ್ಲಿರುವ ಮಚೇಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ರಕ್ಷಣಾ ತಂಡಗಳು ತಕ್ಷಣನೇ ಕಾರ್ಯಪ್ರವೃತ್ತಗೊಂಡು, ಜನರನ್ನು ರಕ್ಷಿಸುವ ಕೆಲಸದಲ್ಲಿ ತೊಡಗಿದರು. ನಾಪತ್ತೆಯಾಗಿರುವವರನ್ನು ಶೋಧಿಸಲಾಗುತ್ತಿದೆ. ಗಾಯಾಳುಗಳನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ. ಗಾಬರಿಗೊಂಡ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಿಶ್ತವಾರ್ನಲ್ಲಿನ ಮೇಘಸ್ಫೋಟ ಮತ್ತು ಪ್ರವಾಹ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ, ಈ ವಿಚಾರವನ್ನು ರಾಜಕೀಯವಾಗಿ ತಿರುಗಿಸುವುದು ಬೇಡ – ಡಿಸಿಎಂ ಡಿಕೆಶಿ!







