ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿ 7 ಮಂದಿ ಆರೋಪಿಗಳ ಜಾಮೀನು ರದ್ದು ಮಾಡಿ ಬಂಧಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಬೆನ್ನಲ್ಲೇ ದರ್ಶನ್, ಪವಿತ್ರಾ ಗೌಡ ಹಾಗೂ ಉಳಿದ ಮೂರು ಮಂದಿಯನ್ನು ಬಂಧಿಸಲಾಗಿದೆ.
ಇದೀಗ ಆರೋಪಿಗಳಾದ ದರ್ಶನ್, ಪವಿತ್ರಾಗೌಡ, ಪ್ರದೂಶ್, ಲಕ್ಷ್ಮಣ್, ನಾಗರಾಜ್ನ್ನು ಪೊಲೀಸರು 64ನೇ CCH ಕೋರ್ಟ್ನ ಜಡ್ಜ್ ಐಪಿ ನಾಯ್ಕ್ ಅವರ ನಿವಾಸಕ್ಕೆ ಕರೆದೊಯ್ದಿದ್ದಾರೆ. ಆರೋಪಿಗಳನ್ನು ಜಡ್ಜ್ ಮುಂದೆ ಹಾಜರು ಪಡಿಸಿದಿದ್ದು, ದರ್ಶನ್ & ಗ್ಯಾಂಗ್ಗೆ ಜಡ್ಜ್ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ ನಟ ದರ್ಶನ್, ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ : ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – 30ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ!
Author: Btv Kannada
Post Views: 270







