79ನೇ ಸ್ವಾತಂತ್ರ್ಯ ಸಂಭ್ರಮ.. ‘ಮಾಣಿಕ್ ಷಾ ಪರೇಡ್’ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದು, ಬಳಿಕ ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಿದ್ದಾರೆ.

ಇದೀಗ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಈ ಸಮಾರಂಭದಲ್ಲಿ ರಾಜ್ಯ ಸಂಪುಟ ಸಚಿವರು, ರಾಜ್ಯದ ಶಾಸಕರು, ಅಧಿಕಾರಿಗಳು ಹಾಗೂ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದಾರೆ. ಈ ಅದ್ಧೂರಿ ಕಾರ್ಯಕ್ರಮದಲ್ಲಿ 8 ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ.

ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಮೆರಗು ಪಡೆದುಕೊಂಡವು. ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್ ಎಫ್, ಗೋವಾ ಪೊಲೀಸ್ ತಂಡ ಸೇರಿ ವಿವಿಧ ಇಲಾಖೆಯ 35 ತುಕಡಿಗಳಲ್ಲಿ 1,150 ಮಂದಿಯಿಂದ ಪಥ ಸಂಚಲನ ಹಾಗೂ ಸರ್ಕಾರಿ ಮತ್ತು ಬಿಬಿಎಂಪಿಯ 1,150 ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಪೊಲೀಸ್ ಸಮೂಹ ವಾದ್ಯಮೇಳದ 253 ಅಧಿಕಾರಿ, ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿದೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ವ್ಯಾಪಕ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸಂಚಾರ ನಿರ್ವಹಣೆ ಹಾಗೂ ಆಚರಣೆಗೆ ಆಗಮಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಭದ್ರತೆಗಾಗಿ ಡಿಸಿಪಿ, ಎಸಿಪಿ, ಪೊಲೀಸ್ ಅಧಿಕಾರಿಗಳು, ಪಿಎಸ್‌ಐ, ಎಎಸ್‌ಐ, ಪಿಸಿ, ಮಹಿಳಾ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಮೈದಾನ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ ಹೆಚ್ಚುವರಿ 100 ಸಿಸಿ ಕ್ಯಾಮೆರಾ ವ್ಯವಸ್ಥೆ, ಬ್ಯಾಗೇಜ್ ಸ್ಕ್ಯಾನರ್, ಕೆಎಸ್‌ಆರ್‌ಪಿ ಮತ್ತು ಸಿಆರ್‌ತುಕಡಿ, ಎರಡು ಅಗ್ನಿಶಾಮಕ ವಾಹನ, ಎರಡು ಆ್ಯಂಬುಲೆನ್ಸ್ ವಾಹನ, ಕ್ಷಿಪ್ರ ಕಾರ್ಯಾಚರಣೆ ಪಡೆ, ಬಾಂಬ್ ನಿಷ್ಕ್ರಿಯ ದಳ ತಂಡದ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ – ಪರಮಾಣು ಬೆದರಿಕೆ ಇನ್ನು ಸಹಿಸಲ್ಲ.. ಪಾಕ್‌ಗೆ ಖಡಕ್​​ ಸಂದೇಶ ರವಾನೆ!​​

Btv Kannada
Author: Btv Kannada

Read More