ಬೆಂಗಳೂರು : ನಗರದ ವಿಲ್ಸನ್ ಗಾರ್ಡನ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮೂರು ಮನೆಗಳು ಛಿದ್ರ, ಛಿದ್ರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ಸದ್ದಿಗೆ ವಿಲ್ಸನ್ ಗಾರ್ಡನ್ ಜನರು ಬೆಚ್ಚಿಬಿದ್ದಿದ್ದಾರೆ. ಮೂರು ಮನೆಗಳ ಮೇಲಿನ ಶೀಟ್ಗಳು ಹಾರಿದ್ದು, ಗೋಡೆಗಳು ಛಿದ್ರ, ಛಿದ್ರವಾಗಿದೆ. ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಸಖತ್ ಸಸ್ಪೆನ್ಸ್ ಥ್ರಿಲ್ಲರ್ ‘ಶೋಧ’ ವೆಬ್ ಸೀರೀಸ್ ಟ್ರೇಲರ್ ರಿಲೀಸ್.. ಆಗಸ್ಟ್ 22ರಿಂದ zee5ನಲ್ಲಿ ಸ್ಟ್ರೀಮಿಂಗ್!
Author: Btv Kannada
Post Views: 316







