ಕಾರವಾರ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಹಣ ವಶಕ್ಕೆ ಪಡೆದಿದೆ. ಇದೀಗ ಶಾಸಕ ಸತೀಶ್ ಸೈಲ್ ಮನೆ ಮೇಲೆ ರೇಡ್ ಮಾಡಿದ್ದ ಇಡಿ ಮಾಹಿತಿ ಬಿಚ್ಚಿಟ್ಟಿದೆ.

ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮನೆಯಲ್ಲಿ 1.68ಕೋಟಿ ನಗದು ಹಣ, 6.75 kg ಚಿನ್ನಾಭರಣ ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ ಅಂದಾಜು 14 ಕೋಟಿ ಹಣವನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿದೆ.

ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ದಾಳಿ ವೇಳೆ ಶಾಸಕ ಸತೀಶ್ ಸೈಲ್ ಮನೆಯಲ್ಲಿ ಇರಲಿಲ್ಲ. ಅನಾರೋಗ್ಯದಿಂದಾಗಿ ದೆಹಲಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನು ದಾಳಿ ವೇಳೆ ಇಡಿ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಶಾಸಕ ಸತೀಶ್ ಸೈಲ್ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್ ಸೈಲ್ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ.
ಇದನ್ನೂ ಓದಿ : ಜೈಲಿಗೆ ಹೋಗ್ತಿದ್ದಂತೆ ದರ್ಶನ್ಗೆ ಮತ್ತೆ ಬೆನ್ನು ನೋವು ಕಾಟ.. ‘ಡಿ’ ಗ್ಯಾಂಗ್ಗೆ ಸಿಕ್ಕ ಹೊಸ ಕೈದಿ ನಂ. ಯಾವುದು ಗೊತ್ತಾ?







