ರಸ್ತೆ ಬದಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ.. ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ!

ಬಳ್ಳಾರಿ : ರಸ್ತೆ ಬದಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ನಡೆದಿದೆ. ಮಂಡ್ಯ ಮೂಲದ ಶ್ವೇತಾ (38), ಕನಕಪುರ ಮೂಲದ ಬಾಲನಾಯಕ (42) ಮೃತ ದುರ್ದೈವಿಗಳು. ಘಟನೆಯಲ್ಲಿ 10ಕ್ಕೂಜ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮೃತರಿಬ್ಬರು ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದರು. ರಾಯರ ದರ್ಶನ ಮುಗಿಸಿ ಮಸ್ಕಿಯಿಂದ ಬೆಂಗಳೂರಿಗೆ ಸರ್ಕಾರಿ ಬಸ್ಸಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ಹಾಗೂ ಬಳ್ಳಾರಿಗೆ ವಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಳ್ಳಾರಿ ಎಸ್ಪಿ ಡಾ. ಶೋಭಾರಾಣಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ಸಿರಿಗೇರಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಈಗಲೂ ಕೆಟ್ಟ ಕಮೆಂಟ್ಸ್ ಬರ್ತಿದ್ಯಾ? ಮತ್ತೆ ದರ್ಶನ್ ಫ್ಯಾನ್ಸ್​ ಬಗ್ಗೆ ಮಾತನಾಡಿದ ನಟಿ ರಮ್ಯಾ.. ಏನಂದ್ರು ಗೊತ್ತಾ?

Btv Kannada
Author: Btv Kannada

Read More