ಅಸ್ಥಿಪಂಜರ ಶೋಧ ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್​​.​​. ಧರ್ಮಸ್ಥಳ ಕೇಸ್​ ಬಗ್ಗೆ ಸದನದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪರಮೇಶ್ವರ್!

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಅನಾಮಿಕ ಹೇಳಿದ್ದ ಹಿನ್ನೆಲೆ ರಾಜ್ಯ ಸರ್ಕಾರ ಎಸ್​ಐಟಿ ರಚಿಸಿ ತನಿಖೆಯನ್ನು ತೀವ್ರಗೊಳಿಸಿದೆ. ಶವಗಳನ್ನು ಹೂತಿರುವ ಸ್ಥಳಗಳಲ್ಲಿ ಅಗೆದು ಅಗೆದು SIT ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಸುಮಾರು 15 ಸ್ಥಳಗಳಲ್ಲಿ ಅಗೆದು ಉತ್ಖನನ ನಡೆಸಿದ್ದು, ಈ ವೇಳೆ ಎರಡು ಜಾಗದಲ್ಲಿ ಅಸ್ಥಿಪಂಜರ, ಮಾನವನ ಮೂಳೆಗಳು ಪತ್ತೆಯಾಗಿವೆ.

ಈ ಸಂಬಂಧ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಇಂದು ಸದನದಲ್ಲಿ ಉತ್ತರ ನೀಡಿದ್ದು, ಇನ್ನೂ ತನಿಖೆ ಆರಂಭವಾಗಿಲ್ಲ, ಅನಾಲಿಸಿಸ್‌ ಬಂದ ಮೇಲೆ ತನಿಖೆ ಶುರುವಾಗುತ್ತೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೆ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್‌ಐಟಿಯವರೇ ನಿರ್ಧರಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಸ್ತಿಪಂಜರದ ವರದಿಗಳು, ಮಣ್ಣಿನ ಪರೀಕ್ಷಾ ವರದಿಗಳು ಹಾಗೂ ವಿಶ್ಲೇಷಣಾ ವರದಿಗಳು ಬಂದ ನಂತರವೇ ಅಸಲಿ ತನಿಖೆ ಆರಂಭ ಆಗಲಿದೆ. ಇನ್ನು ಮುಂದೆ ತನಿಖೆ ತುಂಬಾ ಗಂಭೀರವಾಗಿ ನಡೆಯುತ್ತದೆ. ಪಾರದರ್ಶಕವಾಗಿ, ಯಾರದೇ ಒತ್ತಡಕ್ಕೆ ಮಣಿಯದ ರೀತಿಯಲ್ಲಿ ತನಿಖೆಯ ದಿಕ್ಕನ್ನು ತಪ್ಪಿಸಲು ಅವಕಾಶ ಇಲ್ಲದ ರೀತಿಯಲ್ಲಿ ತನಿಖೆಯನ್ನು ನಡೆಸಲಾಗುತ್ತಿದೆ. ಅನಾಮಿಕ ಇಡೀ ಧರ್ಮಸ್ಥಳವನ್ನು ಅಗೆಯಲು ಹೇಳಿದರೆ ಅದನ್ನು ಮಾಡುವುದಿಲ್ಲ. ಆದರೆ, ಕೆಲವೊಂದು ಜಾಗಗಳಲ್ಲಿ ತೀರಾ ಅನುಮಾನ ಇದ್ದಲ್ಲಿ ಅಗೆದು ಶೋಧ ಮಾಡಲಾಗುತ್ತದೆ ಎಂದು ಹೇಳೀದ್ದಾರೆ.

ಮಣ್ಣಿನ ಮಾದರಿಯನ್ನು ವಿಶ್ಲೇಷಣೆ ಮಾಡಿದಾಗ ರಾಸಾಯನಿಕ ಅಂಶಗಳಲ್ಲಿ ಮನುಷ್ಯನ ಮೂಳೆಗಳು ಕರಗಿರುವ ಬಗ್ಗೆ ವರದಿ ಇದೆಯೇ ಎಂಬುದನ್ನು ಕಾಯಬೇಕಿದೆ. ಆವರೆಗೆ ಎಸ್‌ಐಟಿ ತನಿಖೆಯನ್ನು ಸ್ಥಗಿತ ಮಾಡಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ.

ಇದನ್ನೂ ಓದಿ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ಸಜ್ಜಾದ ‘ಇಂಡಿಯಾ’ ಬಣ!

Btv Kannada
Author: Btv Kannada

Read More