ಸಿಎಂ ವಿರುದ್ಧ 24 ಕೊಲೆಗಳ ಆರೋಪ – ಮಹೇಶ್ ಶೆಟ್ಟಿ ತಿಮರೋಡಿ ಮೇಲೆ FIR.. ಯಾವುದೇ ಕ್ಷಣ ಬಂಧನ ಸಾಧ್ಯತೆ!

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ನೀಡಿರುವ ಹಳೆಯ ಹೇಳಿಕೆಯೊಂದು ಇದೀಗ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ವಿರುದ್ಧ 24 ಕೊಲೆಗಳ ಆರೋಪ ಮಾಡಿದ್ದ ಹೇಳಿಕೆಯೊಂದು ವೈರಲ್ ಆಗಿದ್ದು, ಗೃಹ ಸಚಿವ ಪರಮೇಶ್ವರ್ ಅವರು ತಿಮರೋಡಿಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಈ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಯಾವುದೇ ಕ್ಷಣದಲ್ಲಿ ಅರೆಸ್ಟ್ ಆಗುವ ಸಾಧ್ಯತೆಯಿದೆ.

ಇಂದು ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ತಿಮರೋಡಿ ಹೇಳಿಕೆಯನ್ನು ಪ್ರಸ್ತಾಪಿಸಿ, ಮುಖ್ಯಮಂತ್ರಿಗಳು ಮೌನ ವಹಿಸಿರುವುದನ್ನು ಪ್ರಶ್ನಿಸಿಸದ್ದರು. ತಿಮರೋಡಿ ಹೇಳಿಕೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಗಮನ ಸೆಳೆದು, ಇದಕ್ಕೆ ಸರ್ಕಾರ ಸ್ಪಷ್ಟನೆ ಕೊಡಬೇಕೆಂದು ಒತ್ತಾಯಿಸಿದ್ದರು.

ಸದ್ಯ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಕೊಟ್ಟ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ. 

 

Btv Kannada
Author: Btv Kannada

Read More