ನವದೆಹಲಿ : ಸೆಪ್ಟೆಂಬರ್ 9ರಂದು ನಡೆಯಲಿರುವ ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಬಿ. ಸುದರ್ಶನ್ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ‘ಇಂಡಿಯಾ’ ಮೈತ್ರಿಕೂಟ ಇಂದು ಘೋಷಿಸಿದೆ.

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ (ಉಪರಾಷ್ಟ್ರಪತಿ) ನಡೆಯುವ ಚುನಾವಣೆಗೆ ಸುದರ್ಶನ್ ರೆಡ್ಡಿ ಅವರು ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ, ಬಿಜೆಪಿಯ ಹಿರಿಯ ನಾಯಕ ಸಿ.ಪಿ ರಾಧಾಕೃಷ್ಣನ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಭಾನುವಾರ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿತ್ತು. ರಾಧಾಕೃಷ್ಣನ್ ಬಿಜೆಪಿ ಪಕ್ಷದ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷರಾಗಿದ್ದು, ಆರ್‌ಎಸ್‌ಎಸ್ ಸಂಘ ಪರಿವಾರದಲ್ಲಿ ಅನುಭವಿಯಾಗಿದ್ದಾರೆ.
ಇದನ್ನೂ ಓದಿ : ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ವಿರುದ್ದ ಅವಹೇಳನಕಾರಿ ಪೋಸ್ಟ್ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ FIR!
Author: Btv Kannada
Post Views: 331







