2025ರ ಏಷ್ಯಾ ಕಪ್ಗೆ ಟೀಮ್ ಇಂಡಿಯಾದ ಆಟಗಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಬಿಸಿಸಿಐನ ಆಯ್ಕೆಗಾರರ ಸಮಿತಿಯು 15 ಆಟಗಾರರ ಪಟ್ಟಿಯನ್ನು ಆಯ್ಕೆ ಮಾಡಿ ಘೋಷಿಸಿದೆ.
ಟೀಮ್ ಇಂಡಿಯಾ ಕ್ಯಾಪ್ಟನ್ ಆಗಿ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಉಪನಾಯಕರಾಗಿ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಇನ್ನೂ, ತಂಡದಲ್ಲಿ ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ ಪಟೇಲ್, ಕುಲದೀಪ್ ಯಾದವ್, ಸಂಜು ಸಾಮ್ಸನ್, ಜೀತೇಶ್ ಶರ್ಮಾ, ಜಸ್ ಪ್ರೀತ್ ಬುಮ್ರಾ, ಆರ್ಷ್ ದೀಪ್ ಸಿಂಗ್, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ.
ಉಪನಾಯಕ ಸ್ಥಾನಕ್ಕೆ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 9ರಿಂದ ದುಬೈನಲ್ಲಿ ಏಷ್ಯಾ ಕಪ್ ನಡೆಯಲಿದೆ. ಏಷ್ಯಾ ಕಪ್ನಲ್ಲಿ ಇಂಡಿಯಾ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ತಂಡಗಳು ಆಡಲಿವೆ. ಕರ್ನಾಟಕದ ಕೆ.ಎಲ್. ರಾಹುಲ್, ಬೌಲರ್ ಪ್ರಸಿದ್ಧ ಕೃಷ್ಣಗೂ ಈ ಭಾರಿ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
ಇದನ್ನೂ ಓದಿ : ಧರ್ಮಸ್ಥಳಕ್ಕೆ ಕಳಂಕ ತರುವ ಷಡ್ಯಂತ್ರ, ಪಿತೂರಿ ಬಗ್ಗೆ ನೋವಾಗಿದೆ – ಡಾ. ವೀರೇಂದ್ರ ಹೆಗ್ಗಡೆ ಫಸ್ಟ್ ರಿಯಾಕ್ಷನ್!







