2025ರ ಮಹಿಳಾ ಏಕದಿನ ವಿಶ್ವಕಪ್ (ICC Women’s Cricket World Cup 2025) ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಉಪನಾಯಕಿಯಾಗಿ ಸ್ಮೃತಿ ಮಂಧಾನ ಇರಲಿದ್ದಾರೆ. ಯಾಸ್ತಿಕಾ ಭಾಟಿಯಾ ಮತ್ತು ರಿಚಾ ಘೋಷ್ ವಿಕೆಟ್‌ಕೀಪರ್‌ಗಳಾಗಿದ್ದಾರೆ. ಸೆ.30 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾವನ್ನು ಎದುರಿಸಲಿದ್ದು ಇದರೊಂದಿಗೆ ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿದೆ.
ಮಹಿಳಾ ಏಕದಿನ ವಿಶ್ವಕಪ್ಗೆ ಭಾರತ ತಂಡ : ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಅಮಂಜೋತ್ ಕೌರ್, ರಾಧಾ ಯಾದವ್, ಶ್ರೀ ಚರಣಿ, ಯಸ್ತಿಕಾ ಬಾಟಿಯ ಮತ್ತು ಸ್ನೇಹ ರಾಣಾ.
ಮೀಸಲು ಆಟಗಾರ್ತಿಯರು : ತೇಜಲ್, ಪ್ರೇಮಾ ರಾವಲ್, ಪ್ರಿಯಾ ಮಿಶ್ರ, ಉಮಾ ಛತ್ರಿ, ಮಿನುಮಣಿ ಮತ್ತು ಸಯಾಲಿ ಸದ್ಘರಿ ಮೀಸಲು ಆಟಗಾರ್ತಿಯರಾಗಿರಲಿದ್ದಾರೆ.
ಈ ಸರಣಿಯಲ್ಲಿ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಪಾಕಿಸ್ತಾನ, ಶ್ರೀಲಂಕಾ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಸೇರಿದಂತೆ ಒಟ್ಟು 8 ತಂಡಗಳು ಸೆಣಸಾಡಲಿದ್ದು, ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿದೆ.
ಇದನ್ನೂ ಓದಿ : 2025ರ ಏಷ್ಯಾ ಕಪ್ಗೆ ಟೀಮ್ ಇಂಡಿಯಾ ಪ್ರಕಟ – ಗಿಲ್ಗೆ ಬಂಪರ್ ಲಾಟರಿ!







