ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ – ಮಾಜಿ ಸಚಿವ ಪ್ರಭು ಚವ್ಹಾಣ್‌ ಪುತ್ರನಿಗೆ ಮಧ್ಯಂತರ ಜಾಮೀನು!

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್‌ ಅವರ ಪುತ್ರ ಪ್ರತೀಕ್‌ಗೆ ಹೈಕೋರ್ಟ್‌ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದ ಪ್ರತೀಕ್, ಮುಖ್ಯ ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಮುಹಮ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದ ವಾಸ್ತವಾಂಶಗಳನ್ನು ಪರಿಗಣಿಸಿದರೆ ಜಾಮೀನು ಅರ್ಜಿ ಇತ್ಯರ್ಥವಾಗುವರೆಗೆ ಮಧ್ಯಂತರ ಜಾಮೀನು ನೀಡಬೇಕೆಂಬ ಅರ್ಜಿದಾರರ ಮನವಿ ಪರಿಗಣಿಸಹುದಾಗಿದೆ.

ಮುಖ್ಯ ಅರ್ಜಿ ವಿಲೇವಾರಿಗೆ ಬಾಕಿಯಿರುವ ಸಮಯದಲ್ಲಿ ಅರ್ಜಿದಾರರನ್ನು ಬಂಧಿಸಿದರೆ, 2 ಲಕ್ಷ ರೂ. ವೈಯಕ್ತಿಕ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಒಬ್ಬರ ಶ್ಯೂರಿಟಿ ಪಡೆದು ಬಿಡುಗಡೆ ಮಾಡಬೇಕು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಉಪ್ಪಾರಪೇಟೆ ಠಾಣೆ ಪೊಲೀಸರಿಗೆ ನಿರ್ದೇಶಿಸಿದೆ. ಜತೆಗೆ, ಆರೋಪಿ ಪ್ರತೀಕ್ ತನಿಖೆಗೆ ಸಹಕರಿಸಬೇಕು ಹಾಗೂ ಪ್ರಾಸಿಕ್ಯೂಷನ್‌ ಸಾಕ್ಷ್ಯಧಾರಗಳನ್ನು ತಿರುಚಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

ಇದನ್ನೂ ಓದಿ : 4 ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರಿಗೆ ನೆರೆವಾಗುವ ಬಿಲ್​ ಪಾಸ್​ – ಸಚಿವ ಸಂತೋಷ್ ಲಾಡ್ ಸಾಧನೆ!

Btv Kannada
Author: Btv Kannada

Read More