ಮಲೆನಾಡಿನಲ್ಲಿ ಭಾರೀ ವರ್ಷಧಾರೆ – ಗತವೈಭವಕ್ಕೆ ಮರಳಿದ ವಿಶ್ವ ಪ್ರಸಿದ್ಧ ಜೋಗ ಜಲಪಾತ.. ಪ್ರವಾಸಿಗರು ಫಿದಾ!

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವ ಪ್ರಸಿದ್ಧ ಜೋಗ ಜಲಪಾತಕ್ಕೆ ಜೀವಕಳೆ ಬಂದಿದ್ದು, ಫಾಲ್ಸ್ ಸೌಂದರ್ಯ ಕಂಡು ಪ್ರವಾಸಿಗರು ಮನಸೋತಿದ್ದಾರೆ.

<iframe src="https://www.facebook.com/plugins/video.php?height=476&href=https%3A%2F%2Fwww.facebook.com%2Freel%2F1673757617346424%2F&show_text=false&width=267&t=0" width="267" height="476" style="border:none;overflow:hidden" scrolling="no" frameborder="0" allowfullscreen="true" allow="autoplay; clipboard-write; encrypted-media; picture-in-picture; web-share" allowFullScreen="true"></iframe>

 

ನಿರಂತರ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯದ ಮೂಲಕ ಶರಾವತಿ ನದಿಗೆ ನೀರು ಹರಿದುಬಂದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತದ ಸೌಂದರ್ಯ ಇಮ್ಮಡಿಯಾಗಿದೆ.

ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.‌ ಜೋಗ್​​ ಫಾಲ್ಸ್​​ನ ರಾಜ, ರಾಣಿ, ರೋರರ್ ಹಾಗೂ ರಾಕೆಟ್ ಜಲಧಾರೆಗಳು ಭೋರ್ಗರೆಯುತ್ತಿದ್ದು, ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದು, ಸದ್ಯ ಜೋಗದ ನಯನ ಮನೋಹರ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪ್ರವಾಸಿರನ್ನು ತನ್ನತ್ತ ಸೆಳೆಯುತ್ತಿರುವ ಜೋಗ ಜಲಪಾತ ನೋಡಲು ಬೇರೆ ಬೇರೆ ಜಿಲ್ಲೆಗಳಿಂದ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಜೋಗಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಆಗಬೇಕು ಎಂಬ ಕಾರಣಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಾರ್ವಜನಿಕ ಸಾರಿಗೆ ಪ್ಯಾಕೇಜ್‌ಗಳನ್ನು ಈಗಾಲೇ ಘೋಷಿಸಲಾಗಿದೆ. ಹಾವೇರಿ, ಹುಬ್ಬಳ್ಳಿ-ಧಾರವಾಡ ಭಾಗದಿಂದ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿಶೇಷ ಟೂರ್ ಪ್ಯಾಕೇಜ್ ಘೋಷಿಸಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ರಜಾ ದಿನಗಳಲ್ಲಿ ಒಂದು ದಿನದಲ್ಲಿ ಜೋಗ ಜಲಪಾತಕ್ಕೆ ಕರೆದುಕೊಂಡು ಬರುವ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ – ಮಾಜಿ ಸಚಿವ ಪ್ರಭು ಚವ್ಹಾಣ್‌ ಪುತ್ರನಿಗೆ ಮಧ್ಯಂತರ ಜಾಮೀನು!

Btv Kannada
Author: Btv Kannada

Read More