ಬೆಂಗಳೂರು : ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಜುಲೈ 2024ರಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಕರ್ನಾಟಕ ಸರ್ಕಾರವು 10 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಿಸಿದೆ. ಈ ಅನುದಾನವನ್ನು ರಾಜ್ಯ ವಿಪತ್ತು ನಿರ್ವಹಣಾ ನಿಧಿ (SDRF) ಮೂಲಕ ನೀಡಲಾಗುತ್ತಿದ್ದು, ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ 100 ಕುಟುಂಬಗಳಿಗೆ ನೆರವಾಗಲಿದೆ.

ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಜುಲೈ 2024ರಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತವು ಭಾರೀ ಜನಹಾನಿ ಮತ್ತು ಆಸ್ತಿಪಾಸ್ತಿಗಳ ನಾಶಕ್ಕೆ ಕಾರಣವಾಗಿತ್ತು. ಈ ದುರಂತದಲ್ಲಿ ನೂರಾರು ಕುಟುಂಬಗಳು ತಮ್ಮ ಮನೆ, ಜೀವನೋಪಾಯ ಮತ್ತು ಆಸ್ತಿಯನ್ನು ಕಳೆದುಕೊಂಡಿವೆ. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಸರ್ಕಾರವು, ತನ್ನ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ 10 ಕೋಟಿ ರೂಪಾಯಿಗಳನ್ನು ಪುನರ್ವಸತಿ ಕಾರ್ಯಕ್ಕಾಗಿ ಮೀಸಲಿಡಲು ತೀರ್ಮಾನಿಸಿದೆ.
ಕರ್ನಾಟಕ ಸರ್ಕಾರವು ತನ್ನ 2024-25ನೇ ಸಾಲಿನ ಪೂರಕ ಅಂದಾಜಿನಲ್ಲಿ ವಯನಾ ಭೂಕುಸಿತ ಸಂತ್ರಸ್ತರಿಗೆ ಈ 10 ಕೋಟಿ ರೂ. ಅನುದಾನವನ್ನು ಒದಗಿಸುವ ಕುರಿತು ಉಲ್ಲೇಖಿಸಿದೆ. ಈ ಅನುದಾನವನ್ನು ಎಸ್.ಡಿ.ಆರ್.ಎಫ್ ಮೂಲಕ ಕೇರಳ ಸರ್ಕಾರಕ್ಕೆ ವರ್ಗಾಯಿಸಲಾಗುವುದು, ಇದರಿಂದ ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ಸಹಾಯ, ವಸತಿ, ಮತ್ತು ಜೀವನೋಪಾಯದ ಮರುನಿರ್ಮಾಣಕ್ಕೆ ಸಹಾಯವಾಗಲಿದೆ.
ಇದನ್ನೂ ಓದಿ : ‘ಭಾರತ್ ನಾಮ್ ಸಮ್ಮಾನ್’ ಮ್ಯೂಸಿಕ್ ಆಲ್ಬಂ ಬಿಡುಗಡೆಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ!







