ನವದೆಹಲಿ : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಈ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅಮಿತ್ ಶಾ ಅವರ ಸಂಸತ್ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಈ ವೇಳೆ ಅಮಿತ್ ಶಾ ಅವರ ಮಾರ್ಗದರ್ಶನ ಮತ್ತು ಬೆಂಬಲವು ಅತ್ಯಂತ ಮೌಲ್ಯಯುತವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ : ಹೂಡಿ ವಿಜಯ್ ಕುಮಾರ್ ನೇತೃತ್ವದ ‘ಧರ್ಮಸ್ಥಳ ಚಲೋ’ಗೆ ಮಾಲೂರಿನಿಂದ ಚಾಲನೆ – ನೂರಾರು ಬಸ್, ಕಾರುಗಳಲ್ಲಿ ಹೊರಟ ಭಕ್ತರು!
Author: Btv Kannada
Post Views: 342







