ಮಂಗಳೂರು : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಸಮೀರ್ಗೆ ಇದೀಗ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.
ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ನೀಡಿದ್ದು, ಈ ಮೂಲಕ ಸಮೀರ್ ಬಂಧನದಿಂದ ಪಾರಾಗಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್ 19ರಂದು ಸಮೀರ್ ಎಂಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿಯನ್ನು ಹಾಕಿದ್ದರು. ಇದೀಗ ಆಗಸ್ಟ್ 21ರಂದು ಗುರುವಾರ ಕೋರ್ಟ್ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.
ಇದನ್ನೂ ಓದಿ : ಅಮಿತ್ ಶಾ ಭೇಟಿಯಾದ ಹೆಚ್ಡಿಕೆ – ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಚರ್ಚೆ!
Author: Btv Kannada
Post Views: 249







