ಉಡುಪಿ : ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಇಂದು ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಅರೆಸ್ಟ್ ಮಾಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದ್ದು, ಮುಂದಿನ ವಿಚಾರಣೆಯನ್ನು ಇದೇ ಆಗಸ್ಟ್ 23ರಂದು ನಿಗದಿಪಡಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ನೀಡಲು ನಿರಾಕರಿಸಿರುವ ಉಡುಪಿ ಸಂಚಾರಿ ಪೀಠ ಬ್ರಹ್ಮಾವರದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಆಗಸ್ಟ್ 23ಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ್ದಾರೆ.
ಇದನ್ನೂ ಓದಿ : ವಾಹನ ಸವಾರರಿಗೆ ಸರ್ಕಾರದಿಂದ ಗುಡ್ನ್ಯೂಸ್ – ಟ್ರಾಫಿಕ್ ದಂಡ ಪಾವತಿಗೆ 50% ರಿಯಾಯಿತಿ!
Author: Btv Kannada
Post Views: 263







