ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಮೈಕ್ರೋಫೈನಾನ್ಸ್ ಸಂಸ್ಥೆ ನೀಡುತ್ತಿದ್ದ ಕಿರುಕುಳ ತೀವ್ರ ಚರ್ಚೆಗೆ ಕಾರಣವಾಗಿತ್ತು. ರಾಜ್ಯಾದ್ಯಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ನಿಯಮಾವಳಿಗಳನ್ನು ಜಾರಿಗೆ ತಂದಿತ್ತು.
ಇದೀಗ ಮೈಕ್ರೋ ಫೈನಾನ್ಸಿಯರ್ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು ಕೂಡ ಇದೇ ವೇಳೆ ನಿಮ್ಮೆಲ್ಲರ ಗಮನಕ್ಕೆ ತರಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ರೀಲ್ಸ್ ಮಾಡುವಾಗ ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!







