ಯೂಟ್ಯೂಬರ್​ ಸಮೀರ್‌ಗೆ ತಪ್ಪದ ಸಂಕಷ್ಟ.. ಕಡೂರು ಠಾಣೆಯಲ್ಲಿ ಮತ್ತೊಂದು ದೂರು ದಾಖಲು!

ಚಿಕ್ಕಮಗಳೂರು : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡಿರುವ ಆರೋಪ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಸಮೀರ್ ಎಂ.ಡಿಗೆ ನಿನ್ನೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬಿಗ್​ ರಿಲೀಫ್‌ ನೀಡಿತ್ತು. ಆದ್ರೀಗ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. VHP ಸದಸ್ಯ ಮಂಜು ಜೈನ್ ಎಂಬವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ  ಸಮೀರ್ ವಿರುದ್ಧ ದೂರು ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಯ ನೀಡಿದ್ದಾರೆಂದು ಆರೋಪಿಸಿ ಸಮೀರ್ ಎಂ.ಡಿ ವಿರುದ್ದ  ದೂರು ನೀಡಲಾಗಿದೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕಡೂರು ಪೊಲೀಸರು ಮಂಜು ಜೈನ್‌ರಿಂದ ದೂರು ಪಡೆದಿದ್ದು, ಉನ್ನತ ಅಧಿಕಾರಿಗಳ ನಿರ್ದೇಶನದಂತೆ ಮುಂದಿನ ಕ್ರಮಕ್ಕೆ ಮುಂದಾಗಲಿದ್ದಾರೆ.

ಇದನ್ನೂ ಓದಿ : ಗೌರಿ-ಗಣೇಶ ಹಬ್ಬಕ್ಕೆ ಕೌಂಟ್ ಡೌನ್.. ಈ ನಿಯಮ ಉಲ್ಲಂಘಿಸಿದ್ರೆ ಬಿಳುತ್ತೆ ಕ್ರಿಮಿನಲ್ ಕೇಸ್!

Btv Kannada
Author: Btv Kannada

Read More