ಮುಖೇಶ್ ಅಂಬಾನಿ ತಾಯಿ ಕೋಕಿಲಾಬೆನ್ ಆರೋಗ್ಯ ಸ್ಥಿತಿ ಗಂಭೀರ.. ಆಸ್ಪತ್ರೆಗೆ ಏರ್‌ಲಿಫ್ಟ್‌!

ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಎಡಿಎ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಅವರ ತಾಯಿ ಕೋಕಿಲಾಬೆನ್ ಅಂಬಾನಿ ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ರಾತ್ರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ತುರ್ತು ಪರಿಸ್ಥಿತಿಯಲ್ಲಿ ಅವರನ್ನು ಮನೆಯಿಂದ ಏರ್‌ಲಿಫ್ಟ್ ಮಾಡಲಾಗಿತ್ತು. ಪ್ರಸ್ತುತ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರ ಆರೋಗ್ಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಅಂಬಾನಿ ಕುಟುಂಬವು ಅವರ ಆರೋಗ್ಯದ ಬಗ್ಗೆ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲವಾದರೂ, ವರದಿಗಳ ಪ್ರಕಾರ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೋಕಿಲಾಬೆನ್ ಅಂಬಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥಾಪಕ ದಿವಂಗತ ಕೈಗಾರಿಕೋದ್ಯಮಿ ಧೀರೂಭಾಯಿ ಅಂಬಾನಿಯವರ ಪತ್ನಿ ಮತ್ತು ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿಯವರ ತಾಯಿ ಎಂದೇ ಪ್ರಸಿದ್ಧರಾಗಿದ್ದಾರೆ.

ಇದನ್ನೂ ಓದಿ : MLA ಪ್ರಕಾಶ್​ ಕೋಳಿವಾಡ ಆಪ್ತ ಸಹಾಯಕನ ಮನೆಯಲ್ಲಿ ಕಳ್ಳತನ.. 21 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಕದ್ದು ಖದೀಮರು ಎಸ್ಕೇಪ್!

Btv Kannada
Author: Btv Kannada

Read More