ಬೆಂಗಳೂರು : ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪಗೆ ಬಿಗ್ ಶಾಕ್ ನೀಡಿದ್ದಾರೆ. ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಜೊತೆ ವ್ಯವಹಾರ ನಂಟಿನ ಆರೋಪ ಸಂಬಂಧ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಕುಸುಮಾ ನಿವಾಸದ ಮೇಲೆಯೂ ED ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇಂದು ಬೆಳಗ್ಗೆ ED ಅಧಿಕಾರಿಗಳು ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರ ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವ ಮಧ್ಯೆ, ಬೆಂಗಳೂರಿನಲ್ಲಿರುವ ಕಾಂಗ್ರೆಸ್ ನಾಯಕಿ ಕುಸುಮಾ ಮನೆಗೂ ರೇಡ್ ಮಾಡಲಾಗಿದೆ.
ಇಂದು ಬೆಳಗಿನ ಜಾವ ನಾಲ್ಕುವರೆ ಗಂಟೆಗೆ ಇ.ಡಿ ಅಧಿಕಾರಿಗಳು ಕುಸುಮಾ ಹನುಮಂತರಾಯಪ್ಪ ಅವರ ಮನೆಯ ಕದ್ದ ತಟ್ಟಿದ್ದಾರೆ ಎನ್ನಲಾಗಿದೆ. ಎರಡು ಇನ್ನೋವಾ ಕಾರಿನಲ್ಲಿ ಭದ್ರತಾ ಸಿಬ್ಬಂದಿಗಳ ಜೊತೆಯೇ ಆಗಮಿಸಿರುವ ಇ.ಡಿ ತಂಡ ಶೋಧ ಕಾರ್ಯ ಮುಂದುವರೆಸಿದೆ.
ಇದನ್ನೂ ಓದಿ : ಮುಖೇಶ್ ಅಂಬಾನಿ ತಾಯಿ ಕೋಕಿಲಾಬೆನ್ ಆರೋಗ್ಯ ಸ್ಥಿತಿ ಗಂಭೀರ.. ಆಸ್ಪತ್ರೆಗೆ ಏರ್‌ಲಿಫ್ಟ್!







