ಬೆಂಗಳೂರು : ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದ್ದು, ಈ ವಿಷಯ ತಿಳಿದು ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಾಂಬ್‌ಗಾಗಿ ಹುಡುಕಾಟ ನಡೆಸಿದರು.
ಸದ್ಯಕ್ಕೆ ಕೋರ್ಟ್ ಆವರಣದಲ್ಲಿ ಯಾವುದೇ ಸ್ಫೋಟಕ ವಸ್ತು ಕಂಡುಬಂದಿಲ್ಲ. ಈ ಹಿಂದೆ ಬೇರೆ ಕಡೆಗಳಿಗೆ ಬಂದಿದ್ದ ಬೆದರಿಕೆ ಸಂದೇಶದಂತೆ ನ್ಯಾಯಾಲಯಕ್ಕೂ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್‌ಗಳ ಹಾವಳಿ ಹೆಚ್ಚಾಗುತ್ತಿದೆ. ಕಳೆದ ತಿಂಗಳು ಬೆಂಗಳೂರು ಹಾಗೂ ಕಲಬುರಗಿ ವಿಮಾನ ನಿಲ್ದಾಣಗಳಿಗೆೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಕಚೇರಿಗೆ ಹಾಗೂ ಹಲವು ಶಾಲೆಗಳಿಗೆ ಇಂತಹ ಹುಸಿ ಬಾಂಬ್ ಬೆದರಿಕೆಗಳು ಬಂದಿದ್ದವು.
ಇದನ್ನೂ ಓದಿ : ನಾನು ಅಪ್ಪಟ ಕಾಂಗ್ರೆಸಿಗ, ಬಿಜೆಪಿ-RSS ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್!
Author: Btv Kannada
Post Views: 217







