ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ನನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಮಾಸ್ಕ್ ಮ್ಯಾನ್ನನ್ನು ಕೋರ್ಟ್ಗೆ ಹಾಜರು ಪಡಿಸಲಾಗುತ್ತದೆ.
ಸತತ 19 ಗಂಟೆಗಳ ಕಾಲ ವಿಚಾರಣೆಯ ಬಳಿಕ ಮಾಸ್ಕ್ ಮ್ಯಾನ್‌ನನ್ನ SIT ತಂಡ ಅರೆಸ್ಟ್ ಮಾಡಿದ್ದು, ಎಸ್ಐಟಿ ತಂಡ ಇಂದು ಕೋರ್ಟ್ಗೆ ಹಾಜರು ಪಡಿಸಲಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಮಾಸ್ಕ್ ಮ್ಯಾನ್ ದೂರು ನೀಡಿದ್ದ. ಈ ಆರೋಪದ ಮೇಲೆ SIT ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಆದರೆ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಇದೀಗ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಮಾಸ್ಕ್ ಮ್ಯಾನ್ನನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಪ್ರಣವ್ ಮೋಹಂತಿ ನೇತೃತ್ವದಲ್ಲಿ ಮಾಸ್ಕ್ ಮ್ಯಾನ್ನ ವಿಚಾರಣೆ ನಡೆದಿದೆ. ವಿಚಾರಣೆ ಬಳಿಕ ಬೆಳ್ತಂಗಡಿ SIT ಕಚೇರಿಯಲ್ಲಿ ದೂರುದಾರನನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ : ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ಕೊಲೆ ಆರೋಪಿ ದರ್ಶನ್ – ದಾಸನಿಗೆ ಮತ್ತೆ ಹೆಚ್ಚಿದ ಟೆನ್ಶನ್!







