ಕಲಬುರಗಿ : ಶಾಲಾ ಮೇಲ್ಛಾವಣಿ ಕುಸಿದು ಮೂವರು ವಿಧ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.

ಕಾವೇರಿ, ಶ್ರೀನಿವಾಸ್, ಅಕ್ಷತಾ ಗಾಯಗೊಂಡ ವಿದ್ಯಾರ್ಥಿಗಳು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗ ಏಕಾಏಕಿ ಮೇಲ್ಛಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಯದಿಂದ ಪಾರಾಗಿದ್ದು, ಗಾಯಗೊಂಡ ಮೂವರು ಮಕ್ಕಳನ್ನು ಗುರುಮಿಟಕಲ್ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ – SITಯಿಂದ ಮಾಸ್ಕ್ ಮ್ಯಾನ್ ಅರೆಸ್ಟ್.. ಕೆಲವೇ ಕ್ಷಣಗಳಲ್ಲಿ ಕೋರ್ಟ್ಗೆ ಹಾಜರು!
Author: Btv Kannada
Post Views: 230







