ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ – ಹಲವರು ನಾಪತ್ತೆ, ನೂರಾರು ಮನೆಗಳಿಗೆ ಹಾನಿ!

ಡೆಹ್ರಾಡೂನ್ : ಕೆಲವು ದಿನಗಳ ಹಿಂದಷ್ಟೇ ಭೀಕರ ಮೇಘಸ್ಫೋಟ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಉತ್ತರಾಖಂಡದಲ್ಲಿ ಮತ್ತೆ ಭಯಾನಕ ಮೇಘಸ್ಫೋಟ ಸಂಭವಿಸಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದ್ದು, ಓರ್ವ ಯುವತಿ ಪ್ರವಾಹದಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾರೆ. ಹಲವರು ನಾಪತ್ತೆಯಾಗಿದ್ದು, ಎಸ್‌ಡಿಆರ್‌ಎಫ್ ತಂಡವು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದೆ.
ಉತ್ತರಾಖಂಡದಲ್ಲಿ ಶುಕ್ರವಾರ ಭಾರಿ ಮಳೆಯಾಗಿತ್ತು. ನಂತರ, ಸರಿಸುಮಾರು ಮಧ್ಯರಾತ್ರಿಯ ವೇಳೆಗೆ ಮೇಘಸ್ಫೋಟ ಸಂಭವಿಸಿ ಪ್ರವಾಹ ಪರಿಸ್ಥಿತಿ ಉಂಟಾಯಿತು. ರಾಡಿಬಾಗ್ ಮತ್ತು ಚೆಪ್ಡಾನ್‌ನಲ್ಲಿ ಅನೇಕ ವಾಹನಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ. ಅನೇಕ ಅಂಗಡಿಗಳು ಹಾನಿಗೊಳಗಾಗಿವೆ. ಮಧ್ಯರಾತ್ರಿಯಲ್ಲಿ ಏಕಾಏಕಿ ಭಾರಿ ಪ್ರವಾಹ ಹಾಗೂ ಭೀಕರ ಸದ್ದು ಕೇಳಿ ಬೆಚ್ಚಿಬಿದ್ದ ಜನರು ಮನೆಗಳಿಂದ ಹೊರಬಂದಿದ್ದಾರೆ.

ಇದನ್ನೂ ಓದಿ : ಕಲಬುರಗಿ : ಶಾಲಾ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ!

Btv Kannada
Author: Btv Kannada

Read More