ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ನಾನು ಹೂತಿದ್ದೇನೆ ಎಂದಿದ್ದ ದೂರುದಾರ ಚಿನ್ನಯ್ಯನನ್ನು SIT ಅಧಿಕಾರಿಗಳು ಬಂಧಿಸಿದ್ದರು. ಇದೀಗ ವಿಚಾರಣೆಗೆ ಹಾಜರಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು ಇಂದು ಬೆಳಗ್ಗೆ ಚಿನ್ನಯ್ಯನನ್ನು ಬಂಧಿಸಿದ್ದರು. ಬಂಧನ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸಿದ ಷಡ್ಯಂತ್ರದಲ್ಲಿ ಈತ ಭಾಗಿಯಾಗಿರುವ ಕಾರಣ SIT ಪೊಲೀಸರು ವಶಕ್ಕೆ ಕೇಳಿದ್ದರು.
ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ.
ಇದನ್ನೂ ಓದಿ : ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನ ಆಗಿರುವುದು ನಿಜ, ಇದರ ಹಿಂದೆ ಯಾವ ಜಾಲ ಇದೆ ಅನ್ನೋದನ್ನು ಪತ್ತೆ ಮಾಡ್ತೇವೆ – ಜಿ. ಪರಮೇಶ್ವರ್!
Author: Btv Kannada
Post Views: 246







