ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್​ ರಿಲೀಫ್ – ಉಡುಪಿ ಕೋರ್ಟ್‌ನಿಂದ ಜಾಮೀನು ಮಂಜೂರು!

ಉಡುಪಿ : ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿಯ ಜಿಎಂಎಫ್‌ಸಿ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಅರೆಸ್ಟ್ ಆಗಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರಿಗೆ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಗುರುವಾರ ಬಂಧಿಸಿದ್ದರು. ನಿನ್ನೆ ಕೋರ್ಟ್​ ವಿಚಾರಣೆ ನಡೆಸಿ ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು. ಇದೀಗ ಉಡುಪಿಯ ಜಿಎಂಎಫ್‌ಸಿ ಕೋರ್ಟ್‌ ಮಹೇಶ್ ಶೆಟ್ಟಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ಹಾಗೂ ಸಹಾಯಕ ಸರ್ಕಾರಿ ಅಭಿಯೋಜಕರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ನಾಗೇಶ್ ಎನ್ಎ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ : ದರ್ಶನ್ ಸೇರಿ ಎಲ್ಲಾ ಆರೋಪಿಗಳ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆಗೆ ಸಮಯಾವಕಾಶ – ಆ.30ಕ್ಕೆ ವಿಚಾರಣೆ ಮುಂದೂಡಿಕೆ!

Btv Kannada
Author: Btv Kannada

Read More