ಅಕ್ರಮ ಬೆಟ್ಟಿಂಗ್ ಪ್ರಕರಣ – ಚಿತ್ರದುರ್ಗದ ಕಾಂಗ್ರೆಸ್​ MLA ಕೆ.ಸಿ ವೀರೇಂದ್ರ 5 ದಿನ ED ಕಸ್ಟಡಿಗೆ!

ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ MLA ಕೆ.ಸಿ. ವೀರೇಂದ್ರ ಪಪ್ಪಿ ಅನ್ನು ಅಕ್ರಮ ಬೆಟ್ಟಿಂಗ್ ಕಂಪನಿ, ಹಣ ವರ್ಗಾವಣೆ, ಆಸ್ತಿ ಗಳಿಕೆ ಆರೋಪದಡಿ ED ವಶಕ್ಕೆ ಪಡೆದುಕೊಂಡಿದ್ದು, ಇದೀಗ ಬೆಂಗಳೂರಿನ 35ನೇ ಸಿಸಿಹೆಚ್ ಕೋರ್ಟ್ ವೀರೇಂದ್ರ ಪಪ್ಪಿ ಅನ್ನು​ ಆ.28ರವರೆಗೆ ED ಕಸ್ಟಡಿಗೆ ನೀಡಿದೆ.

ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರ ಮನವಿ ಮಾಡಿದರು.

ಈ ವೇಳೆ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಾಂತರ ರೂ. ನಗದು ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್​ಗಳ ವ್ಯವಹಾರ ನಡೆದಿದೆ. ಕೋಟ್ಯಾಂತರ ರೂ. ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್​ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ಇದನ್ನೂ ಓದಿ : ದೊಡ್ಡಬಳ್ಳಾಪುರದಲ್ಲಿ ಬೈಕ್​​ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ದುರ್ಮರಣ!

Btv Kannada
Author: Btv Kannada

Read More