ಬಾಗಲಕೋಟೆ : ಓವರ್ ಟೇಕ್ ಮಾಡಲು ಹೋಗಿ ಇನ್ನೋವಾ ಕಾರೊಂದು KSRTC ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲ್ಲೂಕಿನ ಹೂಲಗೇರಿ ಗ್ರಾಮದ ಸಮೀಪದ ಹುಬ್ಬಳ್ಳಿ – ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ.

ಸಾಗರ ತೆಕ್ಕೆನ್ನವರ್ ಮೃತ ಕಾರು ಚಾಲಕ. ಸಾಗರ ತೆಕ್ಕೆನ್ನವರ್ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿದ್ದರು ಎನ್ನಲಾಗ್ತಿದೆ.

ಅಪಘಾತದ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, KSRTC ಬಸ್ ಡ್ರೈವರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಅಕ್ರಮ ಬೆಟ್ಟಿಂಗ್ ಪ್ರಕರಣ – ಚಿತ್ರದುರ್ಗದ ಕಾಂಗ್ರೆಸ್ MLA ಕೆ.ಸಿ ವೀರೇಂದ್ರ 5 ದಿನ ED ಕಸ್ಟಡಿಗೆ!
Author: Btv Kannada
Post Views: 549







