ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ನಿಜ – ತಂದೆಯ ಹೆಲ್ತ್ ಅಪ್ಡೇಟ್ ಕೊಟ್ಟ ಪುತ್ರ ನಿಖಿಲ್!

ದೇವನಹಳ್ಳಿ : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯ ಹದಗೆಟ್ಟಿದಂತಿದೆ. ಯಾಕಂದ್ರೆ ಅವರ ಫೋಟೋವನ್ನು ನೋಡುತ್ತಿದ್ದರೆ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗಳಾಗುತ್ತಿವೆ.

ಈ ಸಂಬಂಧ ಇದೀಗ ಸ್ವತಃ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಕಿಲ್ಲ. ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನ ಮುಡಿಪಿಟ್ಟಿದ್ದಾರೆ. ದೇವೇಗೌಡರು ಸಹ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಜನರೇ ರಾಜಕೀಯ ಶಕ್ತಿ ತುಂಬಿದ್ದಾರೆ. ಅದನ್ನ ಜನರಿಗೆ ವಾಪಸ್ ಧಾರೆ ಎರೆಯುವ ಕೆಲಸ ಮಾಡಬೇಕಿದೆ.

ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾಗಿದ್ದು ನಿಜ, ಆದ್ರೆ ಈಗ ಚೇತರಿಕೆಯಾಗುತ್ತಿದೆ. ಇದರ ಮಧ್ಯೆ ಪ್ರತಿನಿತ್ಯ ಇಲಾಖೆಯ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಪುತ್ರ ನಿಖಿಲ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿರುವುದನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ : ಧರ್ಮಸ್ಥಳದಲ್ಲಿ ನಾಪತ್ತೆಯಾದ ಹೆಣ್ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗ್ಬೇಕು – ನಟಿ ಸಂಜನಾ ಗಲ್ರಾನಿ ಆಗ್ರಹ!

Btv Kannada
Author: Btv Kannada

Read More