ದರ್ಶನ್​ ಫ್ಯಾನ್ಸ್​ಗೆ ಗುಡ್​ನ್ಯೂಸ್​ – ‘ದಿ ಡೆವಿಲ್’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್.. ಯಾವಾಗ ಗೊತ್ತಾ?​

‘ಚಾಲೆಂಜಿಂಗ್ ಸ್ಟಾರ್‌’ ದರ್ಶನ್ ತೂಗುದೀಪ ಮತ್ತು ನಿರ್ದೇಶಕ ಪ್ರಕಾಶ್ ವೀರ್ ಕಾಂಬಿನೇಷನ್‌ನ ‘ದಿ ಡೆವಿಲ್’ ಸಿನಿಮಾದ ಮೊದಲ ಹಾಡು ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಕೊನೆಗೂ ರಿಲೀಸ್ ಆಗಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೇ, ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 15ರಂದು ಈ ಹಾಡು ರಿಲೀಸ್ ಆಗಬೇಕಿತ್ತು. ಆದರೆ ಅಂದು ರಿಲೀಸ್ ಮಾಡಿರಲಿಲ್ಲ ಚಿತ್ರತಂಡ. ಇದೀಗ ಹಾಡು ಬಿಡುಗಡೆ ಆಗಿದ್ದು, ಡಿ ಬಾಸ್ ಫ್ಯಾನ್ಸ್ ಖುಷಿಗೆ ಕಾರಣವಾಗಿದೆ.

ಸಖತ್ ಮಾಸ್ ಆಗಿ ಮೂಡಿಬಂದಿರುವ ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಹಾಡಿನಲ್ಲಿ ನಟ ದರ್ಶನ್ ಅವರು ಬ್ಲ್ಯಾಕ್ ಟೀಶರ್ಟ್, ರೆಡ್ ಜಾಕೆಟ್​​ನಲ್ಲಿ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದ ಈ ಹಾಡಿಗೆ ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಸಂತು ಮಾಸ್ಟರ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಅವರು ಸಾಹಿತ್ಯ ಬರೆದಿದ್ದಾರೆ.

<iframe width="560" height="315" src="https://www.youtube.com/embed/LHC3zEeGsts?si=611Jt2cQ1dDO6QGg" title="YouTube video player" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe>

ಇನ್ನೂ ನಟ ದರ್ಶನ್ ಅವರ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಈಗ ಈ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಲಾಗಿದ್ದು, ಇದೇ ವರ್ಷ ಈ ಸಿನಿಮಾ ಬಿಡುಗಡೆ ಆಗಲಿದೆ. ಡಿಸೆಂಬರ್ 12ರಂದು ಜಗತ್ತಿನಾದ್ಯಂತ ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ ಎಂದು ಚಿತ್ರತಂಡ ಘೋಷಿಸಿದೆ.

‘ದಿ ಡೆವಿಲ್’ ಸಿನಿಮಾದ ಬಿಡುಗಡೆಗೆ ಇನ್ನೂ ಸಮಯ ಇದೆ. ಅಷ್ಟರೊಳಗೆ ನಟ ದರ್ಶನ್ ಜಾಮೀನು ಪಡೆದು ಜೈಲಿಂದ ಹೊರ ಬಂದರೆ ಖಂಡಿತವಾಗಿಯೂ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ತಮ್ಮ ನೆಚ್ಚಿನ ನಟನ ಜೊತೆಯಲ್ಲೇ ‘ದಿ ಡೆವಿಲ್’ ಬಿಡುಗಡೆಯನ್ನು ಸಂಭ್ರಮಿಸಬಹುದು. ಜಾಮೀನು ಸಿಗದೇ ಇದ್ದರೆ ಆ ಕೊರಗಿನ ನಡುವೆಯೂ ಸಿನಿಮಾ ನೋಡುವುದು ಅಭಿಮಾನಿಗಳಿಗೆ ಅನಿವಾರ್ಯ ಆಗಲಿದೆ.

ಡೆವಿಲ್​​ ಸಿನಿಮಾದಲ್ಲಿ ನಟ ದರ್ಶನ್​ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಇನ್ನು ಶರ್ಮಿಳಾ ಮಾಂಡ್ರೆ ಮುಂತಾದವರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ. ಸದ್ಯ ನಿನ್ನೆ ಬಿಡುಗಡೆಯಾಗಿರುವ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಎಲ್ಲೆಡೆ ಧೂಳೆಬ್ಬಿಸುತ್ತಿದೆ.

ಇದನ್ನೂ ಓದಿ : ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ನಿಜ – ತಂದೆಯ ಹೆಲ್ತ್ ಅಪ್ಡೇಟ್ ಕೊಟ್ಟ ಪುತ್ರ ನಿಖಿಲ್!

Btv Kannada
Author: Btv Kannada

Read More