ದೆಹಲಿ : ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ನವದೆಹಲಿಯಲ್ಲಿ ಪ್ರತಿಕ್ರಿಯಿಸಿ, ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಹೇಳುವುದರಲ್ಲಿ ಅಭ್ಯಂತರ ಇಲ್ಲ. ಆದರೇ ಕೆಪಿಸಿಸಿ ಅಧ್ಯಕ್ಷರಾಗಿ RSS ಪ್ರಾರ್ಥನೆ ಹಾಡಿದ್ದು ತಪ್ಪು. ಅಧ್ಯಕ್ಷರಾಗಿ ಹೇಳಿದ್ರೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದಿದ್ದಾರೆ.
BJPಯವರು ಇಂತಹ ಹೇಳಿಕೆ ಸಹಜವಾಗಿ ಸಮರ್ಥಿಸಿಕೊಳ್ಳುತ್ತಾರೆ. RSS ದೇಶದಲ್ಲಿ ಈಗಾಗಲೇ ಮೂರು ಬಾರಿ ನಿಷೇಧ ಮಾಡಲಾಗಿತ್ತು. ಡಿಸಿಎಂ ಆಗಿ ಹೇಳಿದ್ರೆ ನಮ್ಮದು ಅಭ್ಯಂತರ ಇಲ್ಲ. ಸರ್ಕಾರ ಎಲ್ಲರ ಸ್ವತ್ತು. ಅದರಲ್ಲಿ ಒಳ್ಳೆಯವರು ಎಲ್ಲಾರೂ ಇರುತ್ತಾರೆ. RSS, ತಾಲಿಬಾನ್‌ಗಳು ಇರುತ್ತಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಹೇಳುವಂತಿಲ್ಲ, ಹೇಳಿದ್ರೆ ಕ್ಷಮೆ ಕೇಳಬೇಕು ಎಂದು ಬಿಕೆ ಹರಿಪ್ರಸಾದ್ ಮನವಿ ಮಾಡಿದರು.
ಮಹಾತ್ಮ ಗಾಂಧಿ ಕೊಂದವರು RSSನವರು. ಹೀಗಾಗಿ ಪಕ್ಷದ ನೆಲೆಗಟ್ಟಿನಲ್ಲಿ ಹಾಗೆ ಹೇಳಿದ್ರೆ ಕ್ಷಮೆ ಕೇಳಬೇಕು. ಯಾರಿಗೆ ಸಂದೇಶ ಕೊಡಲು RSS ಪ್ರಾರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಹಲವು ಮುಖಗಳು ಇವೆ. ಕೃಷಿಕರು, ವ್ಯಾಪಾರಸ್ಥರು, ಉದ್ಯೋಗಸ್ಥರು, ರಾಜಕರಣಿ ಅಂತಾ ಹಲವು ಮುಖಗಳಿವೆ. ಗಾಂಧಿ ಕೊಂದ ಸಂಘಟನೆ ಬಗ್ಗೆ ಹೀಗೆ ಹೇಳಿದ್ದಾರೆ. ಇದು ಯಾರಿಗಾದ್ರು ಸಂದೇಶ ಕೊಡುತ್ತಿರಬಹುದು ಎಂದರು.
ಇದನ್ನೂ ಓದಿ : ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಆ್ಯಕ್ಷನ್ ಶೂಟಿಂಗ್ ಶುರು!







