ಗಣೇಶನ ಮೂರ್ತಿ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆಯದಂತೆ ಕ್ರಮಕ್ಕೆ ಸೂಚನೆ – ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್!

ಬೆಂಗಳೂರು : ಗೌರಿ ಗಣೇಶ ಹಾಗೂ ಈದ್ ಮಿಲಾದ್​ ಹಬ್ಬಕ್ಕೆ ಭದ್ರತೆ ಸಲುವಾಗಿ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್​ ನೇತೃತ್ವದಲ್ಲಿ ಇಂದು ಸಭೆ ನಡೆದಿದೆ. ಸಭೆ ಬಳಿಕ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ಎಲ್ಲಾ ವಿಭಾಗದ ಡಿಸಿಪಿ, ಎಸಿಪಿಗಳ ಜೊತೆ ಸಭೆ ಮಾಡಿದ್ದೇವೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ ಎಂದಿದ್ದಾರೆ.

ಇದೇ ವೇಳೆ ಡಿಜೆ ಸೌಂಡ್ಸ್ ಬಳಕೆ ವಿಚಾರ ಸಂಬಂಧ ಕಮಿಷನರ್ ಸೀಮಂತ್ ಕುಮಾರ್ ಪ್ರತಿಕ್ರಿಯಿಸಿ, ನಿಯಮ ಉಲ್ಲಂಘನೆ ಆದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಬಲವಂತವಾಗಿ ಯಾರಾದ್ರು ಚಂದಾ ವಸೂಲಿ ಮಾಡಿದ್ರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ. ಇಲ್ಲಿವರೆಗೂ ಆ ರೀತಿಯ ಯಾವುದೇ ದೂರು ಬಂದಿಲ್ಲ. ಆ ರೀತಿಯ ಘಟನೆಗಳು ನಡೆದಲ್ಲಿ ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ಪ್ರತಿವರ್ಷ ಯಾವ ರೀತಿ ಸಮಯದಲ್ಲಿ ಗಣೇಶ ಪ್ರತಿಷ್ಠಾನ ಹಾಗೂ ವಿಸರ್ಜನೆ ನಡೆಯುತ್ತೆ. ಭದ್ರತೆ ವಿಚಾರದಲ್ಲಿ ಎಲ್ಲಾ ಸಿಬ್ಬಂದಿಗಳಿಗೂ ಶಿಸ್ತಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ‌ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ : ಬೈಕ್-ಖಾಸಗಿ ಕಂಪನಿ ಬಸ್ ನಡುವೆ ಭೀಕರ ಅಪಘಾತ – ಸವಾರ ಸ್ಥಳದಲ್ಲೇ ಸಾವು!

Btv Kannada
Author: Btv Kannada

Read More