ಬೆಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ಈ ಬೆನ್ನಲ್ಲೇ ಸಾಹಿತಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ನಟಿ ಶಶಿಕಲಾ ಅವರಿಗೆ ಹರಿಶಿಣ, ಕುಂಕುಮ, ಸೀರೆ, ಬಳೆ, ಹೂವು ಒಳಗೊಂಡ ಬಾಗಿನ ನೀಡಿ ಗೌರವಿಸಿದ್ದಾರೆ. ಬಾಗಿನ ಸ್ವೀಕರಿಸಿ ಬಾನು ಮುಷ್ತಾಕ್ ಅವರು, ಶಶಿಕಲಾ ಅವರ ಹಣೆಗೆ ಕುಂಕುಮ ಇಟ್ಟು ಅವರ ಮನೆಯಿಂದಲೂ ಒಂದು ಬಾಗಿನವನ್ನು ನೀಡಿ ಶುಭ ಹಾರೈಸಿದರು.

ನಂತರ ಬಾನು ಮುಷ್ತಾಕ್ ಮಾತನಾಡಿ, ನಾನು ತಂದೆ ತಾಯಿ ಜೊತೆ ಹಲವು ಬಾರಿ ಮೈಸೂರು ಜಂಬೂ ಸವಾರಿ ನೋಡಲು ಹೋಗುತ್ತಿದ್ದೆ. ಈಗ ನನಗೇ ದಸರಾ ಉದ್ಘಾಟನೆಗೆ ಆಹ್ವಾನ ಬಂದಿದೆ. ಹಾಗಾಗಿ, ನನಗೆ ತುಂಬಾ ಖುಷಿಯಾಗಿದೆ. ಇದನ್ನ ನಾವು ಹಲವು ಪ್ರಭೇದಗಳಲ್ಲಿ ನೋಡಬಹುದು. ನೀವು ಚಾಮುಂಡೇಶ್ವರಿ ತಾಯಿ ಅಂತಿರಿ, ನಿಮ್ಮ ಭಾವವನ್ನು ಗೌರವಿಸುತ್ತೇನೆ. ಅನೇಕರು ಇದನ್ನ ನಾಡ ಹಬ್ಬ ಅಂತಾರೆ ಅದನ್ನು ಗೌರವಿಸುತ್ತೇನೆ ಎಂದರು.

ನಾಡ ಹಬ್ಬ, ಚಾಮುಂಡೇಶ್ವರಿ ತಾಯಿ ಅಂತಾ ಪ್ರೀತಿ ಅಭಿಮಾನದಿಂದ ಕರೀತೀರಿ. ಇದು ನಮ್ಮ ಸಂಸ್ಕೃತಿಯ ಭಾಗವೇ ಆಗಿದೆ, ನಾಡಿನ ಭಾಗವಾಗಿದೆ. ಹಾಗಾಗಿ ಇದು ನನಗೂ ಪ್ರಿಯವಾಗಿದೆ. ನಾನು ಗೌರವಿಸುವ ಹಬ್ಬವಾಗಿದೆ, ಪ್ರೀತಿಯಿಂದ ಭಾಗಿಯಾಗುವ ಹಬ್ಬವಾಗಿದೆ ಎಂದು ಹೇಳಿದರು.
ಇದನ್ನೂ ಓದಿ : ಆಕ್ಷನ್ ಪ್ಯಾಕ್ಡ್ ‘ಮದರಾಸಿ’ ಟ್ರೇಲರ್ ರಿಲೀಸ್ – ಮಾಸ್ ಲುಕ್ನಲ್ಲಿ ಅಬ್ಬರಿಸಿದ ಶಿವಕಾರ್ತಿಕೇಯನ್!







