ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಅವರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.
ಐದು ವಲಯದ ಮಹಾಪೌರರು, ಐದು ವಲಯದ ಆಯುಕ್ತರು, ಬೆಂಗಳೂರು ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರನ್ನು ಪ್ರಾಧಿಕಾರ ಒಳಗೊಂಡಿದ್ದು, ಸೆ.2 ರಿಂದಲೇ 5 ಪಾಲಿಕೆಗಳ ಕಾರ್ಯಾರಂಭವಾಗಲಿದೆ. ಇನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನೂ ಸಹ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರನ್ನಾಗಿ ಮಾಡಲಾಗಿದೆ.
ಪದನಿಮಿತ್ತ ಸದಸ್ಯರ ಪಟ್ಟಿ :






ಇದನ್ನೂ ಓದಿ : ಅಸೆಂಬ್ಲಿಯಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಸಿಎಂ ಡಿಕೆ ಶಿವಕುಮಾರ್!
Author: Btv Kannada
Post Views: 343







