ಧರ್ಮಸ್ಥಳ ಕೇಸಲ್ಲಿ SIT ತನಿಖೆ ಗಂಭೀರವಾಗಿ ನಡೀತಿದೆ, ಆದಷ್ಟು ಬೇಗ ಸತ್ಯಾಸತ್ಯತೆ ಹೊರ ಬರಲಿದೆ – ಡಾ.ಜಿ ಪರಮೇಶ್ವರ್!

ಬೆಂಗಳೂರು : ಧರ್ಮಸ್ಥಳ ಪ್ರಕರಣದಲ್ಲಿ SIT ತನಿಖೆ ಗಂಭೀರವಾಗಿ ನಡೆಯುತ್ತಿದೆ, ಧರ್ಮಸ್ಥಳದ ಬಗ್ಗೆ ಕೋಟ್ಯಂತರ ಭಕ್ತರು ಆತಂಕ ವ್ಯಕ್ತಪಡಿಸಿದ್ದರು.
ಹೀಗಾಗಿ ಸತ್ಯಾಸತ್ಯತೆ ಹೊರಗೆ ಬರಬೇಕು ಎಂದು SIT ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಲ್ಲಿ ಡಾ.ಜಿ ಪರಮೇಶ್ವರ್ ಮಾತನಾಡಿ, ಚಿನ್ನಯ್ಯ ಬಂಧನ ಆದ ಮೇಲೆ ಅದರ ಫಾಲೋಅಪ್ ಕೂಡ ಆಗ್ತಿದೆ. ಆದಷ್ಟು ಬೇಗ ತನಿಖೆ ನಡೆದು ಸತ್ಯಾಸತ್ಯತೆ ಹೊರಗೆ ಬರಲಿದೆ, ತನಿಖೆ ಬೇಗ ಮುಗಿಸಬೇಕು ಅಂತ SIT ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಇದೇ ವೇಳೆ ಮಹೇಶ್ ತಿಮರೋಡಿ ಮನೆ ಮೇಲೆ ಎಸ್‌ಐಟಿ ರೇಡ್ ವಿಚಾರ ಸಂಬಂಧ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ಎಸ್ಐಟಿಗೆ ಯಾವುದೇ ನಿರ್ದೇಶನ ಕೊಡಲ್ಲ. ಎಸ್ಐಟಿ ಅವರದ್ದೇ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ NIAಗೆ ತನಿಖೆಗೆ ಕೊಡುವ ಅಗತ್ಯ ಇಲ್ಲ, ವರದಿ ಬಂದ ನಂತರ ಏನು ತೀರ್ಮಾನ ಮಾಡಬೇಕು ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅಸೆಂಬ್ಲಿಯಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಸಿಎಂ ಡಿಕೆ ಶಿವಕುಮಾರ್​!

Btv Kannada
Author: Btv Kannada

Read More