ರಾಜ್ಯದಲ್ಲಿ ಇಂದಿನಿಂದ ಧಾರಾಕಾರ ಮಳೆಯ ಮುನ್ಸೂಚನೆ.. 10 ಜಿಲ್ಲೆಗೆ ಎಚ್ಚರಿಕೆ!

ಬೆಂಗಳೂರು : ಕಳೆದೊಂದು ವಾರ ಬಿಡುವು ಕೊಟ್ಟಿದ್ದ ಮುಂಗಾರು ಮಳೆ ಮತ್ತೆ ಆರ್ಭಟಿಸಲು ಮುಂದಾಗಿದೆ. ಇಂದಿನಿಂದ ಶುರುವಾಗಿ ಈ ವಾರವಿಡೀ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆಯಿದ್ದು, 10 ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಆ. 30ರವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ರಾಜಧಾನಿ ಬೆಂಗಳೂರು ಸೇರಿ ಕರಾವಳಿ, ಮಲೆನಾಡು, ಉತ್ತರ ಒಳನಾಡು, ದಕ್ದಿಣ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಆ. 30ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆ ದಿನ ಉಳಿದ ಜಿಲ್ಲೆಗಳಿಗೆ ಮಳೆ ಅಲರ್ಟ್ ಇರುವುದಿಲ್ಲ. ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ (ಬಿಜಾಪುರ), ಕೊಪ್ಪಳ, ಮತ್ತು ರಾಯಚೂರು ಜಿಲ್ಲೆಗಳಲ್ಲಿ ಈ ಎಚ್ಚರಿಕೆಯನ್ನು ಜಾರಿಗೊಳಿಸಲಾಗಿದೆ. ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗಾಳಿಯಾಡುವ (30-40 ಕಿ.ಮೀ. ಪ್ರತಿ ಗಂಟೆಗೆ) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕವು ಮುಂಬರುವ ದಿನಗಳಲ್ಲಿ ವೈವಿಧ್ಯಮಯ ಹವಾಮಾನ ಪರಿಸ್ಥಿತಿಗಳನ್ನು ಅನುಭವಿಸಲಿದೆ ಮತ್ತು ಇಂದಿನಿಂದ ಹಲವಾರು ಜಿಲ್ಲೆಗಳಲ್ಲಿ ಗಮನಾರ್ಹ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ನಮ್ಮ ಮೆಟ್ರೋ’ ಹಳಿಗೆ ಆಯತಪ್ಪಿ ಬಿದ್ದ ಭದ್ರತಾ ಸಿಬ್ಬಂದಿ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ.. ವಿಡಿಯೋ ವೈರಲ್​!

Btv Kannada
Author: Btv Kannada

Read More