ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ – 17 ಮಂದಿ ಸಾವು!

ಮಹಾರಾಷ್ಟ್ರ : ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿದು 17 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

NDRF​ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿಯವರೆಗೆ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಸಾಯಿ ವಿರಾರ್ ಮುನ್ಸಿಪಲ್ ಕಾರ್ಪೊರೇಷನ್ ಅಗ್ನಿಶಾಮಕ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್‌ಡಿಆರ್‌ಎಫ್) ಎರಡು ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.

ವಿರಾರ್ ಪೂರ್ವದಲ್ಲಿರುವ ರಮಾಬಾಯಿ ಅಪಾರ್ಟ್‌ಮೆಂಟ್‌ನ ನಾಲ್ಕು ಅಂತಸ್ತಿನ ಕಟ್ಟಡದ ಹಿಂಭಾಗವು ಕೆಳಗಿನ ಚಾಲ್ ಮೇಲೆ ಕುಸಿದಿದೆ. ಕಳೆದ 36 ಗಂಟೆಗಳಿಂದ ಕಾಲ ನಡೆಯುತ್ತಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಏಕಾಏಕಿ ಕಟ್ಟಡ ಕುಸಿತದಿಂದಾಗಿ, ಹಲವಾರು ಕುಟುಂಬಗಳು ನಿರಾಶ್ರಿತರಾಗಿದ್ದಾರೆ, ಅವರೆಲ್ಲರನ್ನೂ ಚಂದನ್ಸರ್ ಸಮಾಜಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಆಹಾರ, ನೀರು ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್​​ ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಸಂಕಷ್ಟ – 6 ದಿನ ED ಕಸ್ಟಡಿಗೆ ನೀಡಿದ ಕೋರ್ಟ್​!

Btv Kannada
Author: Btv Kannada

Read More