ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಗುರುವಾರವೂ ಧಾರಾಕಾರ ಮಳೆ ಸುರಿದಿದ್ದು, ಶುಕ್ರವಾರ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು (ಆ.29) ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಸೇರಿದಂತೆ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಎಡೆಬಿಡದೆ ಮಳೆಯಾಗಿದ್ದು, ಮುಂದಿನ 24 ಗಂಟೆಯ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರ ರಾತ್ರಿಯಿಂದ ಸುರಿದ ಮಳೆಗೆ ದ.ಕ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು.
ಇನ್ನು ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬುಧವಾರದಿಂದ ಮಳೆ ಚುರುಕುಗೊಂಡಿದ್ದು, ಆ.29 ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಆ.29ಕ್ಕೆ ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಮತ್ತು ಹಾಸನ, ವಿಜಯಪುರ, ಯಾದಗಿರಿ ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ : ಸುಜಾತ ಭಟ್ಗೆ ರಕ್ಷಣೆ ಒದಗಿಸಲು ಮಹಿಳಾ ಆಯೋಗ ಆದೇಶ!







