ಮಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ಪೊಲೀಸರು ಯೂಟ್ಯೂಬರ್ ಸಮೀರ್ ಎಂ.ಡಿಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆ ಆ.24ರಂದು ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದರು.

ಇದೀಗ ಯೂಟ್ಯೂಬರ್ ಸಮೀರ್ ಎಂ.ಡಿಗೆ SIT ಬುಲಾವ್ ನೀಡಿದೆ. AI ಬಳಸಿ ಧರ್ಮಸ್ಥಳ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಎಂ.ಡಿಗೆ ತನಿಖಾಧಿಕಾರಿ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಅಭಿಮಾನ್ ಸ್ಟುಡಿಯೋದ ಜಮೀನು ‘ಅರಣ್ಯ’ ಎಂದು ಘೋಷಣೆ – ಜಾಗ ಹಿಂಪಡೆಯಲು ಪಡೆಯಲು ಸರ್ಕಾರ ನಿರ್ಧಾರ!
Author: Btv Kannada
Post Views: 268







