ಮೈಸೂರು : ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು.

ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಐದನೇ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ ಎಂದು ಕೆ.ವಿ. ಪ್ರಭಾಕರ್ ಹೇಳಿದರು.
ಈ ವೇಳೆ ಸುತ್ತೂರು ಶ್ರೀ ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು, ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷ ಶಂಬುಲಿಂಗ, ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಹಿರಿಯ ಪತ್ರಕರ್ತ ಅಂಶಿಪ್ರಸನ್ನಕುಮಾರ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಮಾಜಿ ಅಧ್ಯಕ್ಷರಾದ ಎಸ್.ಟಿ. ರವಿಕುಮಾರ್, ಸಿ.ಕೆ.ಮಹೇಂದ್ರ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ದರ್ಮಾಪುರ ನಾರಾಯಣ, ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ ಇನ್ನಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಕುಡುಕರನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ ಪುಂಡರು!







