ಮಂಗಳೂರು : ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಸೆಪ್ಟೆಂಬರ್ 1ರಂದು ‘ಧರ್ಮಸ್ಥಳ ಚಲೋ’ ಕೈಗೊಂಡು ಬೃಹತ್ ಸಮಾವೇಶ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಹಾಗಾಗಿ ಇಂದು ಬೃಹತ್ ಸಮಾವೇಶಕ್ಕಾಗಿ ಬಿಜೆಪಿ ನಾಯಕರು ಸ್ಥಳದ ಪರಿಶೀಲನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಶಾಸಕರಾದ ವಿ. ಸುನೀಲ್ ಕುಮಾರ್, ಧರ್ಮಸ್ಥಳ ಚಲೋ ರಾಜ್ಯ ಸಂಚಾಲಕರು ಮತ್ತು ಶಾಸಕರಾದ ಎಸ್.ಆರ್. ವಿಶ್ವನಾಥ್, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಧರ್ಮಸ್ಥಳ ಚಲೋ ರಾಜ್ಯ ಸಹ-ಸಂಚಾಲಕರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ, ಧರ್ಮಸ್ಥಳ ಚಲೋ ರಾಜ್ಯ ಸಹ-ಸಂಚಾಲಕರು ಮತ್ತು ರಾಜ್ಯ ಕಾರ್ಯದರ್ಶಿಗಳಾದ ಹೆಚ್.ಸಿ. ತಮ್ಮೇಶ್ ಗೌಡ, ಧರ್ಮಸ್ಥಳ ಚಲೋ ರಾಜ್ಯ ಸಹ-ಸಂಚಾಲಕರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ರವಿ ಗೌಡ ನಟನೆಯ ‘I am god’ ಚಿತ್ರದ ಸಾಂಗ್ ರಿಲೀಸ್ – ರೋಮ್ಯಾಂಟಿಕ್ ಥ್ರಿಲ್ಲರ್ ಸಿನಿಮಾದ ಹಾಡಿಗೆ ಧ್ವನಿಯಾದ ಸಂಜಿತ್ ಹೆಗ್ಡೆ!







