ಬೆಂಗಳೂರು : ಮದ್ಯ ಪ್ರಿಯರಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಬಿಗ್ ಶಾಕ್ ನೀಡಿದ್ದಾರೆ. ರಾಜಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಆಗಸ್ಟ್ 30 ಮತ್ತು 31 ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರ ಬಿಗಿ ಭದ್ರತೆಯ ಜೊತೆ ಮದ್ಯ ಮಾರಾಟ ಕೂಡ ನಿಷೇಧಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಇರುವುದರಿಂದ ಕಿಡಿಗೇಡಿಗಳು ಮಧ್ಯ ಸೇವಿಸಿ ದಾಂದಲೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ 2 ದಿನ ಮದ್ಯ ಮಾರಾಟವನ್ನ ನಿಷೇಧಿಸಲಾಗಿದೆ.

ಶನಿವಾರ – ಭಾನುವಾರ ಬೆಂಗಳೂರಿನ ಬಹುತೇಕ ಬಾರ್ – ವೈನ್ ಶಾಪ್ಗಳನ್ನು ಕ್ಲೋಸ್ ಮಾಡುವಂತೆ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಆದೇಶ ನೀಡಿದ್ದಾರೆ. ಇನ್ನು ಬೆಂಗಳೂರಿನ ಎಲ್ಲಾ ಡಿವಿಷನ್ DCP ಗಳಿಗೆ ಕಟ್ಟೆಚ್ಚರ ವಹಿಸಲು ಆದೇಶಿಸಿದ್ದಾರೆ.


ಇದನ್ನೂ ಓದಿ : ಸೆ.1ರಂದು ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ – ಬೃಹತ್ ಸಮಾವೇಶಕ್ಕೆ ಸ್ಥಳ ಪರಿಶೀಲಿಸಿದ BJP ನಾಯಕರು!







