ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ – ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ ಮೊದಲ ವಾರದವರೆಗೂ ಮಳೆ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದು ಕೂಡ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದ್ದು, ಗಣೇಶ ಚತುರ್ಥಿ ಹಬ್ಬವನ್ನು ಮಳೆಯಲ್ಲಿಯೇ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ.

ಇನ್ನು ತೀವ್ರ ಮಳೆಯ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್.ಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ‌ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಲಿಂಗದಹಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುರಿದ್ದು, ಹೊನ್ನಾವರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೂ ಇಂದು ರಜೆ ಘೋಷಿಸಲಾಗಿದೆ.

ಇದನ್ನೂ ಓದಿ : ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್!

Btv Kannada
Author: Btv Kannada

Read More