ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಅರ್ಚಕರೊಬ್ಬರನ್ನು ಬಂಧನ ಮಾಡಿ, ಬಳಿಕ ಬಿಡುಗಡೆ ಮಾಡಲಾಗಿದೆ. ಹೌದು.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕೆಂಗೇರಿ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡುವ ವೇಳೆ ಅರ್ಚಕ ಗುರುರಾಜ್ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಅವಾಚ್ಯ ಶಬ್ದಗಳನ್ನು ಬಳಸಿ ಸಿದ್ದರಾಮಯ್ಯ ಅವರಿಗೆ ಅವಮಾನಿಸಿದ್ದರು. ಅವರ ನಿಂದನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಸಿಎಂ ವಿರುದ್ಧ ಅವಹೇಳನ ಮಾಡಿದ್ದ ವಿಚಾರವಾಗಿ ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು ಅರ್ಚಕ ಗುರುರಾಜ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಯೂಟ್ಯೂಬ್‌ನಲ್ಲಿ ಪ್ರಸಾರವಾದ ವಿಡಿಯೋ ಆಧಾರದ ಮೇಲೆ ದೂರು ದಾಖಲಿಸಿಕೊಂಡು, ಗುರುರಾಜ್‌ರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದರು.
ಅರ್ಚಕ ಗುರುರಾಜ್‌ಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್ : ಗುರುರಾಜ್‌ರನ್ನು ಬಂಧಿಸಿ, 6ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ನ್ಯಾಷನಲ್ ಗೇಮ್ಸ್ ವಿಲೇಜ್‌ನಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಚಕ ಗುರುರಾಜ್‌ಗೆ ಮಧ್ಯಂತರ ಜಾಮೀನು ನೀಡಿದ್ದು, ಸದ್ಯ ಅರ್ಚಕ ಗುರುರಾಜ್‌ರನ್ನು ರಿಲೀಸ್ ಮಾಡಲಾಗಿದೆ.
ಇದನ್ನೂ ಓದಿ : “ಕೊಡಗಿನಲ್ಲಿ ಡೇಟಿಂಗ್‌ಗಾಗಿ ಹುಡುಗಿಯರು, ಆಂಟಿಯರು ಸಿಗುತ್ತಾರೆ” – ವಿಡಿಯೋ ಹರಿಬಿಟ್ಟ ಆರೋಪಿ ಅರೆಸ್ಟ್!







