ಸುಳ್ಳು ಸುದ್ದಿ ಹಬ್ಬಿಸಿದ ಆರೋಪ – ಗಿರೀಶ್ ಮಟ್ಟಣ್ಣವ‌ರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು FIR!

ಮಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಡಿ ಗಿರೀಶ್ ಮಟ್ಟಣ್ಣವ‌ರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಮಟ್ಟಣ್ಣವ‌ರ್ ಮತ್ತು ತಿಮರೋಡಿ ಸಮಾಜದ ಸೌಹಾರ್ದಮಯ ವಾತಾವರಣ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್ ದೂರು ನೀಡಿದ್ದಾರೆ. ಆ.30ರಂದು ಯುಟ್ಯೂಬ್‌ನಲ್ಲಿ ಕಂಡ ವಿಡಿಯೊವೊಂದರಲ್ಲಿ ಮದನ್ ಬುಗುಡಿ ಎಂಬ ವ್ಯಕ್ತಿಯ ಜತೆಗೂಡಿ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ಗಿರೀಶ್ ಮಟ್ಟಣ್ಣವರ್‌ ಸಮಾಜದ ಸ್ವಾಸ್ಥ್ಯ ಕದಡುವ ಮಾತುಗಳನ್ನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಎಸ್‌ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಬ್ಲಾಗರ್‌ಗಳು ಮತ್ತು ಇತರ ಕೆಲವು ವ್ಯಕ್ತಿಗಳನ್ನು ಸೇರಿಸಿಕೊಂಡು ಕೆಲವು ದಿನಗಳಿಂದ ಮಟ್ಟಣ್ಣವ‌ರ್ ಮತ್ತು ತಿಮರೋ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಂಚು ಹೂಡುತ್ತಿದ್ದಾರೆ ಎಂದು ಪ್ರವೀಣ್ ಕೆ.ಆರ್ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ಕಲಂ 204, 319(2), 353(2), ಮತ್ತು 3(5) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್​ಪಿ ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಬಿಲ್ಡರ್ ಮನೋಜ್ ಕಿಡ್ನಾಪ್ ಮಾಡಿದ್ದ ರೌಡಿಶೀಟರ್ ಗ್ಯಾಂಗ್ ಅಂದರ್!

Btv Kannada
Author: Btv Kannada

Read More