52ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್​.. ಮಧ್ಯ ರಾತ್ರಿಯೇ ಕೇಕ್ ಕತ್ತರಿಸಿ ಫ್ಯಾನ್ಸ್ ಜೊತೆ ಸಂಭ್ರಮಿಸಿದ ಬಾದ್​ ಷಾ!

ಕಿಚ್ಚ ಸುದೀಪ್ ಇಂದು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ 52ನೇ ಹುಟ್ಟುಹಬ್ಬವನ್ನ ಅದ್ಧೂರಿಯಾಗಿ ಬೆಂಗಳೂರಿನ ನಂದಿಲಿಂಕ್ ಗ್ರೌಂಡ್​ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಸೆಲಬ್ರೇಟ್ ಮಾಡಿಕೊಂಡಿದ್ದಾರೆ.

ಬಾದ್​​ ಷಾ ಸುದೀಪ್​​ ಅವರು ರಾತ್ರಿ ಹನ್ನೆರಡು ಗಂಟೆಗೆ ಕೇಕ್ ಕತ್ತರಿಸಿ ಫ್ಯಾನ್ಸ್ ಜೊತೆ ಸಂಭ್ರಮಿಸಿದ್ದಾರೆ. ಈ ಬಾರಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಕಿಚ್ಚ ಭರ್ಜರಿ ಉಡುಗೊರೆ ನೀಡಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಇನ್ನೂ ನಂದಿಲಿಂಕ್ ಗ್ರೌಂಡ್‌ನಲ್ಲಿ ಅಭಿಮಾನಿಗಳ ಘೋಷಣೆ ಮುಗಿಲುಮುಟ್ಟಿತ್ತು. ರಾತ್ರಿಯೆಲ್ಲ ಕಿಚ್ಚನ ಅಭಿಮಾನಿಗಳು ಸಡಗರ ಸಂಭ್ರಮದಲ್ಲಿ ತೊಡಗಿದ್ದಾರೆ. ಸುದೀಪ್‌ ಅವರಿಗೆ ಒತ್ತಡದ ಕೆಲಸವಿದ್ದ ಕಾರಣ ರಾತ್ರಿಯೇ ಅಭಿಮಾನಿಗಳೊಟ್ಟಿಗೆ ಕೇಕ್‌ ಕತ್ತರಿಸಿ ಬರ್ತ್ ಡೇ ಸೆಲಬ್ರೇಷನ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಭೇಟಿಗಾಗಿ, ಅವರ ಹುಟ್ಟುಹಬ್ಬ ಆಚರಣೆಗಾಗಿ ಕಾದ ಅಭಿಮಾನಿಗಳನ್ನ ನಿರಾಸೆಗೊಳಿಸದೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ರಾತ್ರಿ ಕೇಕ್ ಕತ್ತರಿಸಿದ ಬಳಿಕ ಅಭಿಮಾನಿಗಳ ಮುಂದೆ ಮನಬಿಚ್ಚಿ ಮಾತಾಡಿದ್ದಾರೆ. ಇದೇ ವೇಳೆ ಬಿಗ್‌ ಸ್ಕ್ರೀನ್‌ನಲ್ಲಿ ಅಭಿಮಾನಿಗಳಿಗಾಗಿ ‘ಮಾರ್ಕ್‌’ ಟೈಟಲ್‌ ಟೀಸರ್‌ ಅನ್ನೂ ಸಹ ಪ್ರಸಾರ ಮಾಡಲಾಗಿದೆ.

ಇದನ್ನೂ ಓದಿ : ಬಸವೇಶ್ವರನಗರ ಪೊಲೀಸ್ ಸಬ್ ಇನ್ಸ್​​ಪೆಕ್ಟರ್​​ ವಿರುದ್ಧ ಲೋಕಾಯುಕ್ತಕ್ಕೆ ಹೋಟೆಲ್ ಮಾಲೀಕರ ದೂರು!

Btv Kannada
Author: Btv Kannada

Read More