ಸಿಡ್ನಿ : ಟೆಸ್ಟ್ ಮತ್ತು ಏಕದಿನ ವಿಶ್ವಕಪ್ ಮೇಲೆ ಗಮನ ಹರಿಸುವ ಸಲುವಾಗಿ ಆಸ್ಟ್ರೇಲಿಯಾದ ಘಾತಕ ವೇಗಿ ಮಿಚೆಲ್ ಸ್ಟಾರ್ಕ್, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಮಿಚೆಲ್ ಸ್ಟಾರ್ಕ್, ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುವ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್ ಪಂದ್ಯಾವಳಿಗೆ ಕೇವಲ ಆರು ತಿಂಗಳ ಮೊದಲು ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಆಸ್ಟ್ರೇಲಿಯಾಗೆ ದೊಡ್ಡ ಆಘಾತವಾದಂತಾಗಿದೆ.

ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದಾಗ್ಯೂ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರೆಯುವೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ಮಿಚೆಲ್ ಸ್ಟಾರ್ಕ್ ತಿಳಿಸಿದ್ದಾರೆ.

ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯಾ ಪರ 65 ಟಿ20 ಪಂದ್ಯಗಳನ್ನಾಡಿದ್ದಾರೆ. ಅದರಲ್ಲೂ 2021ರಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಚೊಚ್ಚಲ ಟಿ20 ವಿಶ್ವಕಪ್ ಗೆದ್ದುಕೊಡುವಲ್ಲಿ ಸ್ಟಾರ್ಕ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ 13 ವರ್ಷಗಳ ಟಿ20 ಕೆರಿಯರ್ಗೆ ಗುಡ್ ಬೈ ಹೇಳಲು ಎಡಗೈ ವೇಗಿ ನಿರ್ಧರಿಸಿದ್ದಾರೆ.

ಇದನ್ನೂ ಓದಿ : ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ನಟ ದರ್ಶನ್? ಇಂದು ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ!







