ಚಿತ್ರದುರ್ಗ : ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಇಂದು ಮತ್ತೆ ಇಡಿ ಬಿಗ್ ಶಾಕ್ ಕೊಟ್ಟಿದೆ. ಚಿತ್ರದುರ್ಗದಲ್ಲಿರುವ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು 2ನೇ ಬಾರಿಗೆ ರೇಡ್ ಮಾಡಿದ್ದಾರೆ. ಸದ್ಯ ಇಡಿ ವಶದಲ್ಲೇ ಇರುವ ಕಾಂಗ್ರೆಸ್ ಶಾಸಕನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಆನ್‌ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಕೇಸ್ ಹಿನ್ನೆಲೆ ಈ ದಾಳಿ ನಡೆದಿದ್ದು, ಮನೆಯಲ್ಲಿದ್ದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಇದೀಗ ವೀರೇಂದ್ರ ಪಪ್ಪಿ ಅವರ 4 ಐಷಾರಾಮಿ ಕಾರು ಜಪ್ತಿ ಮಾಡುವ ಸಾಧ್ಯತೆಯಿದೆ.
ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ ಹಣ ಜೊತೆ ಚಿನ್ನಾಭರಣ ವಿದೇಶಿ ಕರೆನ್ಸಿಯನ್ನ ಇಡಿ ವಶಕ್ಕೆ ಪಡೆದಿತ್ತು.
ವೀರೇಂದ್ರ ಪಪ್ಪಿ ವಿಚಾರಣೆ ಆಧರಿಸಿ ಮತ್ತೆ ಇಡಿ ದಾಳಿ ಮುಂದುವರಿದಿದ್ದು, ಶಾಸಕನ ಹೇಳಿಕೆ ಪಡೆದಿರುವ ಅಧಿಕಾರಿಗಳು ಅಕ್ರಮ ಬಯಲು ಮಾಡಲು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಅಮೆರಿಕದಲ್ಲಿ ಭೀಕರ ರಸ್ತೆ ಅಪಘಾತ – ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು!







