ಧರ್ಮಸ್ಥಳ ಪ್ರಕರಣಕ್ಕೆ ವಿದೇಶದಿಂದ ಫಂಡಿಂಗ್ ಆರೋಪ – ತನಿಖೆಗೆ ED ಎಂಟ್ರಿ!

ಮಂಗಳೂರು : ಧರ್ಮಸ್ಥಳದ ವಿರುದ್ಧದ ಷಡ್ಯಂತ್ರಕ್ಕೆ ವಿದೇಶಿ ಫಂಡಿಂಗ್‌ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಧರ್ಮಸ್ಥಳ ಪ್ರಕರಣಕ್ಕೆ ಅಧಿಕೃತವಾಗಿ ತನಿಖೆಗೆ ಎಂಟ್ರಿ ಕೊಟ್ಟಿದೆ.

ವಿದೇಶಿ NGO ಗಳಿಂದ ಹಣ ಫಂಡಿಂಗ್ ಆಗಿದೆಯಾ ಎಂಬ ಶಂಕೆ ವ್ಯಕ್ತವಾಗಿದ್ದು, ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್​ಗಳ ಬಗ್ಗೆ ಇಡಿ ಮಾಹಿತಿ ಸಂಗ್ರಹ ಮಾಡುವ ಕೆಲಸ ಆರಂಭಿಸಿದೆ. ಹೀಗಾಗಿ ಕೆಲ ಅಕೌಂಟ್​ಗಳ ಮಾಹಿತಿ ನೀಡುವಂತೆ ಬ್ಯಾಂಕ್​​ಗೆ ಇಡಿ ಪತ್ರದ ಮೂಲಕ ಮನವಿ ಮಾಡಿದೆ.

ಕಾನೂನು ಬಾಹಿರವಾಗಿ ಹಣ ಬಂದಿರುವ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು, ಕಳೆದ 5 ವರ್ಷಗಳ ಟ್ರಾನ್ಸ್​ಕ್ಷನ್ ನೀಡುವಂತೆ ಕೆಲ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ. ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಗಳು, ವಿದೇಶದಿಂದ ಹಣ ಬಂದರೆ ಅದಕ್ಕೆ ಕಾರಣವೇನು ಎಂಬುದನ್ನು ತಿಳಿಸುವಂತೆ ಬ್ಯಾಂಕ್​ ಗಳಿಗೆ ಇಡಿ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರ : ಧರ್ಮಸ್ಥಳದ ವಿಚಾರದಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಬೇರೆ ಬೇರೆ ಕಡೆಯಿಂದ ವಿದೇಶದಿಂದ ಫಂಡ್ ಬಂದಿದೆ. ಯೂಟ್ಯೂಬರ್‌ಗಳಿಗೆ ವಿವಿಧ ಕಡೆಯಿಂದ ಫಂಡ್ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಆಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇತ್ತೀಚೆಗೆ ಪತ್ರ ಬರೆದಿದ್ದರು.

ಇದನ್ನೂ ಓದಿ : ಬೆಂಗಳೂರಲ್ಲಿ “ಮಿರಾಯ್” ಸಿನಿಮಾ ಪ್ರಚಾರ ಮಾಡಿದ ನಟ ತೇಜ ಸಜ್ಜಾ!

Btv Kannada
Author: Btv Kannada

Read More